ಪೂರ್ಣ ಕುಂಭ, ಕಲಾ ತಂಡಗಳಿಂದ ಭವ್ಯ ಮೆರವಣಿಗೆ ಶಹಾಬಾದ: ಹೂ ನಗರದ ಇಂಜನ್ ಫೈಲ್ ಬಡಾವಣೆಯಲ್ಲಿ ಜೀರ್ಣೋದ್ದಾರಗೊಂಡಿರುವ ರೇಣುಕಾ ಎಲ್ಲಮ್ಮಾ ದೇವಿಯ ಮೂರ್ತಿ ಪ್ರತಿಷ್ಠಾಪನೆಗೆ  ಪ್ರಾರಂಭವಾಗಿದ್ದು, ಮಹಿಳೆಯರ ಪೂರ್ಣ ಕುಂಭ ಸ್ವಾಗತ, ಕಲಾ ತಂಡಗಳೊಂದಿಗೆ ಸೋಮವಾರ ನಗರದ ಪ್ರಮುಖ ಬೀದಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ನಿಂಬಾಳ್ಕರ ಕುಟುಂಬದ ಕುಲದೇವತೆಯಾಗಿರುವ ಕೊತ್ಲಾಪುರ ರೇಣುಕಾ ಎಲ್ಲಮ್ಮಾ ದೇವಿಯ ಜೀರ್ಣಾವಸ್ಥೆಯ ದೇವಸ್ಥಾನವನ್ನು ಸಂಪೂರ್ಣ ಶಿಲಾ ದೇಗುಲ ನಿರ್ಮಿಸಲಾಗಿದೆ.  ಅ.೨೭ ರಿಂದ ೨೯ ವರೆಗೆ ಕೇರಳದ […]

Continue Reading

ಕಲಬುರಗಿ: ಸರಕಾರಿ ನೌಕರರಿಗೆ ಗೀತ ಗಾಯನ ಸ್ಪರ್ಧೆ

ಕಲಬುರಗಿ: ಸರಕಾರಿ ನೌಕರರ ಸಂಘದಿಂದ ಕರ್ನಾಟಕರಾಜ್ಯೋತ್ಸವ ಅಂಗವಾಗಿ ಸರಕಾರಿ ನೌಕರರಿಗೆ ಬೆಂಗಳೂರಿನ ಸಂಘದ ಆವರಣದಲ್ಲಿ ನ.8 ರಂದು ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ನೌಕರರ ಸಂಘವು ನೀಡಿರುವ ಆನ್‌ಲೈನ್ ಲಿಂಕ್ https://forms.gle/8pR3m5nXowwQzccs9 ಮೂಲಕ ನ.2ರ ಸಂಜೆ 5 ಗಂಟೆಯೊಳಗೆ ನೋಂದಾಯಿಸಿಕೊಳ್ಳಬೇಕು. ವಿಜೇತ ತಂಡಗಳಿಗೆ ಪ್ರಥಮ 1,00,000 ರೂ., ದ್ವಿತೀಯ 75,000 ರೂ. ಹಾಗೂ ತೃತೀಯ ಬಹುಮಾನ 50,000 […]

Continue Reading

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ: ಹಳೆಯ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಹೊಸ ಕ್ಯಾಪ್‌ಗಳನ್ನು ವಿತರಣೆ ಮಾಡಲಿದ್ದಾರೆ. ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗಳಿಗ ಹೊಸ ಕ್ಯಾಪ್‌ ವಿತರಣೆ ನಡೆಯಲಿದೆ. ಜೂನ್‌ನಲ್ಲಿ ನಡೆದಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹೊಸ […]

Continue Reading

ಜೇವರ್ಗಿ: ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ

ಕಲಬುರಗಿ: ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ ಜೇವರ್ಗಿ ಪಟ್ಟಣದಲ್ಲಿ ಜರುಗಿತು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ಸಹಯೋಗದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಸರ್ಕಾರಿ ಐಟಿಐ ಕಾಲೇಜಿನ ಜೆಟಿಓ ಶಿವಶರಣಪ್ಪ ಹಳಿಮನಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜೆಟಿಓ ಸೈಯದ್ ಅಯಾಜ್, ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ […]

Continue Reading

ಬಣ್ಣಬಣ್ಣದ ಮಾತನಾಡಿ 3 ಕೋಟಿ ವಂಚನೆ: ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ

ಹಾಸನ: ಬಣ್ಣಬಣ್ಣದ ಮಾತನಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೆಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ಹಲವರ ಬಳಿ ಚಿಟ್ಸ್‍ನಲ್ಲಿ 1 ಕೋಟಿ ರೂ. ಚೀಟಿ ಹಾಕಿದ್ದೆನೆ ಎಂದು ಸ್ಲಿಪ್ ತೋರಿಸಿ ಹಣ ಪಡೆದಿದ್ದಳು. ಅಲ್ಲದೆ ಮಗಳನ್ನು ವಿದೇಶದಲ್ಲಿ ಇಂಜಿನಿಯರಿಂಗ್ ಓದಿಸುವುದಕ್ಕೆ, ಒಂದು ಕೋಟಿ ರೂ. ಮನೆ ಖರೀದಿಸಿದ್ದೆನೆಂದು ಹೇಳಿ ಹಲವರಿಂದ ಸಾಲ ಪಡೆದಿದ್ದಳು. ಚಿನ್ನಾಭರಣ ಅಡವಿಟ್ಟು ಜನ ಲಕ್ಷ […]

Continue Reading

ನಕಲಿ ಲೋಕಾಯುಕ್ತ ಜಸ್ಟೀಸ್ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು

ಬೆಂಗಳೂರು: ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನು. ಅಚ್ಚರಿ ಅನಿಸಿದ್ದರು ಇದು ನಿಜ. ಲೋಕಾಯುಕ್ತ ಜಸ್ಟೀಸ್ ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೋನ್ ಮಾಡಿ ನಿಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ನಿಮ್ಮ ಮೇಲಿನ ಆರೋಪಿಗಳಿಂದ ರೇಡ್ ಮಾಡ್ತಿವಿ ಅಂತ ಬೆದರಿಸೋಕೆ ಶುರು ಮಾಡಿದ್ದಾರೆ. ಟ್ರೂ ಕಾಲರ್‌ನಲ್ಲಿ ಲೋಕಾಯುಕ್ತ ಜಸ್ಟೀಸ್ ಹೆಸರು ಬಳಸಿ ಕರೆ ಮಾಡಿದ್ದಾರೆ. ಇದರಿಂದ ಕರೆ ಸ್ವೀಕರಿಸಿದ ಸರ್ಕಾರಿ ಅಧಿಕಾರಿಗಳು […]

Continue Reading

ಮಾರ್ಚ್‌ ವೇಳೆಗೆ 3,500 ಹುದ್ದೆ ಭರ್ತಿ: ಎಸ್‌ಬಿಐ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದೆ. ಜೂನ್ ತಿಂಗಳಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ಮತ್ತೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸ್ವೀಕರಿಸಲಾಗಿದೆ. ದೇಶದಾದ್ಯಂತ ಬ್ಯಾಂಕ್‌ನ ಕಾರ್ಯಾಚರಣೆ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ […]

Continue Reading

ಕಠಿಣ ಪರಿಶ್ರಮ, ತಾಳ್ಮೆಯಿಂದ ಉನ್ನತ ಸಾಧನೆ ಸಾಧ್ಯ: ಮುಡಬಿ ಗುಂಡೇರಾವ

ಕಲಬುರಗಿ: ಜೀವನದಲ್ಲಿ ಗುರಿ ನಿಗದಪಡಿಸಿಕೊಂಡು ಅದಕ್ಕೆ ಪೂರಕವಾಗಿ ಕಠಿಣ ಪರಿಶ್ರಮ, ತಾಳ್ಮೆ, ಸಮಯ ಬದ್ಧತೆಯಿಂದ ನಿರಂತರವಾಗಿ ಪ್ರಯತ್ನಿಸಿದರೆ, ಖಂಡಿತವಾಗಿ ಜೀವನದಲ್ಲಿ ಉನ್ನತವಾದ ಸಾಧನೆ ಮಾಡಲು ಸಾಧ್ಯ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಕಳೆದ ಅಗಷ್ಟ್ ಬ್ಯಾಚ್‌ನ ತರಬೇತಿ ಹೊಂದಿ ಉತ್ತೀರ್ಣ ವಿದ್ಯಾರ್ಥಿಗಳಿ ರವಿವಾರ ಏರ್ಪಡಿಸಲಾಗಿದ್ದ ‘ಪ್ರಮಾಣ ಪತ್ರಗಳ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಿಂದಲೆ ತಂದೆ-ತಾಯಿ, ಗುರು-ಹಿರಿಯರಿಗೆ ಮತ್ತು ದೇಶಕ್ಕೆ […]

Continue Reading

ಬೆಂದವರಷ್ಟೆ ಬೇಂದ್ರೆಯಾಗಲು ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬೇಂದ್ರೆಯವರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸಿ, ಅವುಗಳನ್ನು ಸಾಹಿತ್ಯದಲ್ಲಿ ಕೃಷಿ ಮಾಡಿದ್ದರಿಂದ ಅವರ ಸಾಹಿತ್ಯವು ಹೆಚ್ಚು ನೈಜತೆ ಹಾಗೂ ಗಟ್ಟಿತನದಿಂದ ಕೂಡಿದೆ. ಅವರಂತೆ ಸಾಹಿತ್ಯ ಮೇರು ಸಾಧನೆ ಮಾಡಬೇಕಾದರೆ, ಸಾಕಷ್ಟು ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕು. ‘ಜೀವನದಲ್ಲಿ ಬೆಂದವರು ಮಾತ್ರ ಬೇಂದ್ರೆಯಾಗಲು ಸಾಧ್ಯ’ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಅಭಿಮತಪಟ್ಟರು. ತಾಲೂಕಿನ ಫರತಾಬಾದನ ಕರಿಗೋಳೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವರಕವಿ ದ.ರಾ ಬೇಂದ್ರೆಯವರ 44ನೇ ಪುಣ್ಯಸ್ಮರಣೋತ್ಸವ’ […]

Continue Reading

ಕಲೆಯ ಪೋಷಣೆ, ಕಲಾವಿದರಿಗೆ ಪ್ರೋತ್ಸಾಹ ಅಗತ್ಯ

ಕಲಬುರಗಿ: ಭಾರತ ದೇಶ ಅನೇಕ ಧರ್ಮ, ಸಮುದಾಯ, ಭಾಷೆ, ಪ್ರದೇಶಗಳು, ಅಪರೂಪದ ವಾಸ್ತುಶಿಲ್ಪಗಳು, ಕಲಾಕೃತಿಗಳು, ಐತಿಹಾಸಿಕ ಸ್ಮಾರಕಗಳನ್ನು ಹೊಂದಿದ್ದು ದೊಡ್ಡ ಮ್ಯೂಸಿಯಂ ಆಗಿದೆ. ವಿಶ್ವದ ಯಾವುದೇ ಕಲಾವಿದನಿಗೆ ನಮ್ಮ ದೇಶವೇ ಆಧಾರವಾಗಿದ್ದು, ಇಲ್ಲಿಗೆ ಆಗಮಿಸಿ ಅಧ್ಯಯನ ಮಾಡುತ್ತಿದ್ದಾರೆ. ದೇಶದಲ್ಲಿರುವ ಅಪರೂಪದ ಕಲಾಕೃತಿಗಳು, ಐತಿಹಾಸಿಕ ಸ್ಥಳಗಳು, ಸ್ಮಾರಕಗಳನ್ನು ರಕ್ಷಿಸಿ, ಮುಂದಿನ ಜನಾಂಗಕ್ಕೆ ಮುಟ್ಟಿಸುವ ಕಾರ್ಯವಾಗಬೇಕಾಗಿದೆ ಎಂದು ಅಂತಾರಾಷ್ಟೀಯ ಖ್ಯಾತ ಚಿತ್ರ ಕಲಾವಿದ ಡಾ.ಸುಬ್ಬಯ್ಯ ಎಂ.ನೀಲಾ ಅಭಿಮತಪಟ್ಟರು. ನಗರದ ಅಗ್ನಿಶಾಮಕ ಠಾಣೆಯ ಎದುರುಗಡೆಯಿರುವ ಮಹಾಲಕ್ಷ್ಮಿ ನಗರದ ನೀಲಾ ಆರ್ಟ್ ಗ್ಯಾಲರಿ’ಯಲ್ಲಿ […]

Continue Reading